Sunday, 24th November 2024

ಗಿರಿಜನ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳ ಸ್ಥಾಪನೆ

ವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ, ಮುಂದಿನ 3 ವರ್ಷಗಳಲ್ಲಿ ದೇಶಾದ್ಯಂತ ಗಿರಿಜನ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಏಕಲವ್ಯ ಮಾದರಿ ಶಾಲೆಗಳಿಗಾಗಿ 38,800 ಶಿಕ್ಷಕರು ಹಾಗೂ 740 ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗು ವುದು ಎಂದು ಘೋಷಿಸಿದರು. ಇದರಿಂದ 3.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.