ನವದೆಹಲಿ: ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್ಗಳ ಪಟ್ಟಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಚೇರ್ಮನ್ ಮುಖೇಶ್ ಅಂಬಾನಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಅದಾನಿ ಸಮೂಹದ ಷೇರುಗಳಲ್ಲಿ ಭಾರೀ ಪ್ರಮಾಣದ ಕುಸಿತವಾಗಿದೆ. ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರ ನಿವ್ವಳ ಮೌಲ್ಯವು 74 ಬಿಲಿಯನ್ ಡಾಲರ್ಗೆ ಕುಸಿದಿದೆ.
$84.3 ಬಿಲಿಯನ್ ನಿವ್ವಳ ಮೌಲ್ಯದೊಂದಿಗೆ, ಮುಖೇಶ್ ಅಂಬಾನಿ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿ ದ್ದಾರೆ. 84.1 ಬಿಲಿಯನ್ ಡಾಲರ್ ನಿವ್ವಳ ಮೌಲ್ಯ ದೊಂದಿಗೆ ಗೌತಮ್ ಅದಾನಿ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಈಗ 12ನೇ ಸ್ತಾನಕ್ಕಿಳಿಸಿ ದ್ದಾರೆ. ಇನ್ನೂ, ಭಾರತದ ಸಿರಿವಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕಿಳಿದಿದ್ದಾರೆ. ಈ ಮೂಲಕ ಮುಕೇಶ್ ಅಂಬಾನಿ ಭಾರತದ ನಂ.1 ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.
Read E-Paper click here