Friday, 22nd November 2024

113 ಹೊಸ ವೈರಸ್ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆ ಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಈವರೆಗೆ 5,30,745 ಮಂದಿ ಮೃತಪಟ್ಟಿದ್ದು, ಒಟ್ಟು ಸೋಂಕು ಪ್ರಕರಣಗಳು 4,46,83,363ಕ್ಕೆ ಏರಿಕೆಯಾಗಿವೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣ ಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.57 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.