ತುಮಕೂರು : ಗ್ರಾಮಾಂತರ ಮಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಸಲು ಗ್ರಾಮದ ಶ್ರೀ ತಿರುಮಲ ಲಕ್ಷ್ಮಿ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಡಿ.ಸಿ ಗೌರಿಶಂಕರ್ ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ, ರೈತರು ನೆಮ್ಮದಿಯಿಂದ ಇರಲಿ, ಸರ್ವರಿಗೂ ಒಳಿತಾಗಲೆಂದು ಪ್ರಾರ್ಥಿಸಿ, ಸಾವಿರಾರು ಭಕ್ತಾದಿಗಳ ಜತೆಗೂಡಿ ತೇರನ್ನು ಎಳೆಯುವ ಮೂಲಕ ಭಗವಂತನ ಕೃಪೆಗೆ ಪಾತ್ರರಾದರು.
ಇದೇ ಸಂದರ್ಭದಲ್ಲಿ ದೇವಾಲಯಕ್ಕೆ 1 ಲಕ್ಷ ದೇಣಿಗೆ ನೀಡಿದರು.