ನವದೆಹಲಿ: ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಹೊಸ ರಾಜ್ಯ ಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
- ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ನೇಮಕ
- ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಾಲ್ಯ ತ್ರಿವಿಕ್ರಮ್ ಪರ್ನಾಯಕ್
- ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ್ ಪ್ರಸಾದ್ ಆಚಾರ್ಯ
- ಜಾರ್ಖಂಡ್ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್
- ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ
- ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವ ಪ್ರತಾಪ್ ಶುಕ್ಲಾ
- ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ರಾಧಾ ಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ, ಅರುಣಾಚಲ ಪ್ರದೇಶದ ರಾಜ್ಯಪಾಲ ಬ್ರಿಗೇಡಿಯರ್ (ಡಾ. ಬಿ.ಡಿ. ಮಿಶ್ರಾ (ನಿವೃತ್ತ) ಅವರನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.
- ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
- ಬಿಸ್ವಾ ಭೂಷಣ್ ಹರಿಚಂದನ್ ಅವರನ್ನು ಛತ್ತೀಸ್ ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
- ರಾಜ್ಯಪಾಲರಾದ ಅನುಸೂಯಾ ಉಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
- ಲಾ ಗಣೇಶನ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
- ಫಾಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
- ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.