Saturday, 23rd November 2024

ನವವಿವಾಹಿತೆ ಆತ್ಮಹತ್ಯೆ

ದಿಸ್ಪುರ್: ತನ್ನ ಗಂಡನನ್ನು ಬಂಧಿಸುತ್ತಾರೆಂದು ಹೆದರಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು.

ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ಮಂದಿಯನ್ನು ಬಂಧಿಸಿದ್ದರು. ಈ ಕುರಿತು ತನ್ನ ಪತಿಯನ್ನು ಬಂಧಿಸುತ್ತಾರೆ ಎಂದು ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಈ ಹಿನ್ನಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.