ಅದರಂತೆ ಜೆಪಿ ನಡ್ಡಾ ಇಂದಿನಿಂದ (ಫೆ.19-21) ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ ನಡ್ಡಾ ಉಡುಪಿ ಮತ್ತು ಬೇಲೂರಲ್ಲಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮಂಗಳೂರಿನ ಕಾರ್ಯಕ್ರಮ ವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಚಿಕ್ಕಮಗಳೂರಿನಲ್ಲಿ ನಡೆಯುವ ಬೈಕ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ.
ಈ ವೇಳೆ ನಡ್ಡಾ ಶೃಂಗೇರಿ ಮಠಕ್ಕೆ ಭೇಟಿ ನೀಡಿ, ರಾತ್ರಿ ತಂಗಲಿದ್ದಾರೆ. ಹಿಂದೂ ಪವಿತ್ರ ಸ್ಥಳ ಶೃಂಗೇರಿ ಶಾರದಾ ಮಠವು ನಾಲ್ಕು ಪ್ರಮುಖ ಪೀಠಗಳಲ್ಲಿ ಒಂದು. ಇದನ್ನು ಅದ್ವೈತ ವೇದಾಂತದ ಪ್ರತಿಪಾದಕರಾದ ಆದಿಗುರು ಶಂಕರಾಚಾರ್ಯರು ಸ್ಥಾಪಿಸಿದ್ದಾರೆ. ಈ ಹಿಂದೆ ಶಾರದಾ ಮಠದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿರ ಬ್ರಾಹ್ಮಣ ಸಮಾಜದ ಮೇಲೆ ಆರೋಪ ಮಾಡಿದ್ದರು.
ಬಳಿಕ ನಡ್ಡಾ ಹಾಸನದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕರ್ತ ಸಮ್ಮೇಳನದಲ್ಲಿ ಭಾಗವಹಿಸುತ್ತಾರೆ.
ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿ ಭದ್ರಕೋಟೆಯಾಗಿದ್ದು, ಅತಿ ದೊಡ್ಡ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಸವಾಲಿನ ಕೆಲಸವಾಗಿದೆ.