ತುಮಕೂರು: ಸಹಕಾರಿ ರತ್ನವೆಂದೇ ಗುರುತಿಸಿಕೊಂಡಿರುವ ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷ ಎನ್.ಎಸ್.ಜಯಕುಮಾರ್, ನಗರ ವಿಧಾನಸಭಾ ಕ್ಷೇತ್ರದಿಂದ ರಣರಂಗಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದು ಬಿಜೆಪಿ ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.
ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುವ ಮೂಲಕ ಜನಮಾನಸದಲ್ಲಿ ಮನೆ ಮಾಡಿರುವ ಜಯಕುಮಾರ್, ಈ ಬಾರಿ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕದನಕ್ಕಿಳಿಯಲು ಪ್ರಯತ್ನಿಸುತ್ತಿರುವುದು ಕುತೂಹಲ ಮೂಡಿಸಿದೆ.ಮೂರ್ನಾಲ್ಕು ಬಾರಿ ದೆಹಲಿ ಯಲ್ಲಿ ಬಿಜೆಪಿಯ ಮುಖಂಡ ಬಿ.ಎಲ್.ಸಂತೋಷ್ ಭೇಟಿ ಮಾಡಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ಬಿಜೆಪಿಯಿಂದ ಜಯಕುಮಾರ್ ಅವರಿಗೆ ಟಿಕೆಟ್ ನೀಡಿದರೆ ಜಯಗಳಿಸುವ ವಾತಾವರಣ ವಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.