Thursday, 12th December 2024

ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ನಿಧನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ (72) ನಿಧನ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿ ಗಮನ ಸೆಳೆದಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಯಾಗಿ ಹಲವು ಮಹತ್ವದ ತೀರ್ಪು ನೀಡಿದ್ದರು.

1951ರ ಸೆಪ್ಟೆಂಬರ್ 5ರಂದು ಜನಿಸಿದ್ದ ಶೈಲೇಂದ್ರ ಕುಮಾರ್, 1976ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. 2000ರ ಡಿಸೆಂಬರ್ ನಲ್ಲಿ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.