ತುಮಕೂರು: ತಾಲೂಕಿನ ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ ಮಾ.8 ರಿಂದ 13 ರವರೆಗೆ 6 ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥಸ್ವಾಮಿ ಜಿನ ಮಂದಿರ ಸಮಿತಿಯ ಅಧ್ಯಕ್ಷ ನಾಗರಾಜು ಎಸ್.ಜೆ., ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಂದರಗಿರಿಯಲ್ಲಿ 6 ದಿನಗಳ ಕಾಲ ನಡೆಯುವ ಈ ಸಮಾರಂಭ ರಾಷ್ಟಮಟ್ಟ ದಾಗಿದ್ದು, ಸಹಸ್ರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೈನ ಮುನಿಗಳು, ಮಾತಾಜಿಗಳು, ದಕ್ಷಿಣ ಭಾರತದ ವಿವಿಧ ಜೈನ ಮಠಗಳ ಪೀಠಾಧೀಶರು ಸಮಾರಂಭಕ್ಕೆ ಸಾಕ್ಷಿಯಾಗ ಲಿದ್ದಾರೆ ಎಂದರು.
ಮಾ.8 ರಿಂದ ಆರಂಭವಾಗಲಿರುವ ಪಂಚಕಲ್ಯಾಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಹಿಸುವರು. ಶ್ರೀ ಅಮೋಘ ಕೀರ್ತಿ ಮಹಾರಾಜ್ ಮತ್ತು ಅಮರಕೀರ್ತಿ ಅಮೋಘಮಹಾರಾಜ್ ಮತ್ತು ವಿವಿಧ ಮಠಗಳ ಭಟ್ಟಾರಕ ಪಟ್ಟಾಚಾರ್ಯರು ಸಾನ್ನಿಧ್ಯ ವಹಿಸುವರು.
ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸುರೇಂದ್ರ ಕುಮಾರ್, ಮುಂಬೈನ ರಾಕೇಶ್ ಜೈನ್, ದಿಗಂಬರ ಜೈನ ಸಮಾಜದ ಅಧ್ಯಕ್ಷರಾದ ಎಸ್.ಜಿ. ನಾಗರಾಜ್ ಸೇರಿದಂತೆ ಸ್ಥಳೀಯ ಜನಪತಿನಿಧಿಗಳು ಭಾಗವಹಿಸು ವರು.
ಮಾ.9 ಕ್ಕೆ ಗರ್ಭಕಲ್ಯಾಣ ಮಹೋತ್ಸವ, ಮಾ.10 ಕ್ಕೆ ಜನ್ಮ ಕಲ್ಯಾಣ ಮಹೋತ್ಸವ, ಮಾ.11 ರಂದು ದೀಕ್ಷಾ ಕಲ್ಯಾಣ ಮಹೋತ್ಸವ, ಮಾ.12 ರಂದು ಕೇವಲ ಜ್ಞಾನ ಕಲ್ಯಾಣ, ಮಾ.13 ರಂದು ಮೋಕ್ಷ ಕಲ್ಯಾಣ ಮಹೋತ್ಸವ ನಡೆಯಲಿದೆ. ಪ್ರತಿ ದಿನ ಸಂಜೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯ ಕ್ರಮ ಜರುಗಲಿವೆ ಎಂದು ವಿವರಿಸಿದರು.
ಮಾ. 13 ಕ್ಕೆ ಸಮವಶರಣದ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. 6 ದಿನಗಳ ಕಾಲ ನಡೆಯಲಿರುವ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಜರುಗಲಿವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಜಿನಮಂದಿರ ಸಮಿತಿಯ ಸುರೇಶ್ಕುಮಾರ್, ಬಾಹುಬಲಿ, ಪಾರ್ಶ್ವನಾಥ್, ಚಂದ್ರಕೀರ್ತಿ, ಜಿನೇಶ್, ಶೀತಲ್, ಕರ್ನಾಟಕ ಜೈನ ಅಸೋಸಿಯೇಷನ್ ನಿರ್ದೇಶಕ ಆರ್.ಜೆ. ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.