ಮಾಸ್ಕೊ: ರಷ್ಯಾದ ಕೋವಿಡ್ ಲಸಿಕೆ ಸ್ಪುಟ್ನಿಕ್ ವಿ ಅಭಿವೃದ್ಧಿಪಡಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ವಿಜ್ಞಾನಿ ಆಂಡ್ರೆ ಬೊಟಿಕೋವ್ ಅವರನ್ನು ಅವರದ್ದೇ ಅಪಾರ್ಟ್ಮೆಂಟ್ನಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾ ಗಿದೆ.
ಬೆಲ್ಟ್ನಿಂದ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. 47 ವರ್ಷ ವಯಸ್ಸಿನ ಬೊಟಿಕೋವ್ ಅವರು ಗಾಮೇಲೆಯಾ ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಕಾಲಜಿ ಆಯಂಡ್ ಮ್ಯಾಥಮೆಟಿಕ್ಸ್ನ ಹಿರಿಯ ಸಂಶೋ ಧಕರಾಗಿದ್ದರು.
ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಕ್ಕಾಗಿ ಆಂಡ್ರೆ ಬೊಟಿಕೋವ್ ಅವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2021ರಲ್ಲಿ ‘ಆರ್ಡರ್ ಆಫ್ ಮೆರಿಟ್ ಫಾರ್ ದಿ ಫಾದರ್ಲ್ಯಾಂಡ್’ ಗೌರವ ನೀಡಿ ಗೌರವಿಸಿದ್ದರು.
ಶಂಕಿತ ವ್ಯಕ್ತಿಯು ಸುಮಾರು 29 ವರ್ಷ ವಯಸ್ಸಿನವನಾಗಿದ್ದು, ಬೆಲ್ಟ್ನಿಂದ ವಿಜ್ಞಾನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇಬ್ಬರ ನಡುವೆ ಸಂಘರ್ಷ ಇದ್ದಿರಬೇಕು ಎಂದು ಶಂಕಿಸಲಾಗಿದೆ. ಬಂಧಿತ ಯುವಕ ತಪ್ಪೊಪ್ಪಿ ಕೊಂಡಿದ್ದು, ದೋಷಾರೋಪ ಹೊರಿಸಲಾಗಿದೆ. ಆರೋಪಿಯು ಅಪರಾಧ ಹಿನ್ನೆಲೆಯುಳ್ಳವನಾಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.