ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್ ಸತತ ಎರಡನೇ ಅವಧಿಗೆ ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮೇಘಾಲಯದ ನಿಯೋಜಿತ ಸಿಎಂ ಕಾನ್ರಾಡ್ ಸಂಗ್ಮಾ ಮತ್ತು ರಾಜ್ಯ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು. ಶಿಲ್ಲಾಂಗ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.ಎನ್ಪಿಪಿಯ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಬಿಜೆಪಿಯ ಅಲೆಕ್ಸಾಂಡರ್ ಲಾಲೂ ಹೆಕ್ ಸೇರಿದಂತೆ 12 ಸದಸ್ಯರ ಸಚಿವ ಸಂಪುಟಕ್ಕೆ ನೂತನ ಸದಸ್ಯರಿಗೆ ಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದರು.
ಶಿಲ್ಲಾಂಗ್ನಲ್ಲಿ ಮೇಘಾಲಯದ ಉಪಮುಖ್ಯಮಂತ್ರಿಗಳಾಗಿ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಸ್ನಿಯಾವ್ಭಾಲಾಂಗ್ ಧಾರ್ ಪ್ರಮಾಣ ವಚನ ಸ್ವೀಕರಿಸಿದರು.