Saturday, 23rd November 2024

ಅಫ್ಘಾನಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ

ಕಾಬೂಲ್: ಅಫ್ಘಾನಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ʻಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 1:40 ಕ್ಕೆ ಭೂಮಿಯಿಂದ 136 ಕಿಮೀ ಆಳದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆʼ.

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 2 ರಂದು ಅಫ್ಘಾನಿಸ್ತಾನದ ಫೈಜಾಬಾದ್ ಪ್ರದೇಶದಲ್ಲಿ 4.1 ತೀವ್ರತೆಯ ಭೂಕಂಪ ಅಪ್ಪಳಿಸಿತು.