ನವದೆಹಲಿ : ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಪ್ಲಾಟ್‌ಫಾರ್ಮ್‌ನಲ್ಲಿ ಮುಂದಿನ ಮೂರು ವರ್ಷದಲ್ಲಿ ದಿನಕ್ಕೆ ಸರಾಸರಿ 100 ಕೋಟಿ ವರ್ಗಾವಣೆ ಗಳು ನಡೆಯಲಿವೆ ಎಂದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಕಾರ್ಯಕಾರಿ ನಿರ್ದೇಶಕ ಮತ್ತು ಸಿಇಒ ದಿಲೀಪ್ ಅಸ್ಬೆ ತಿಳಿಸಿದ್ದಾರೆ.
ಯುಪಿಐ ಪೇಮೆಂಟ್ ವ್ಯವಸ್ಥೆಯ ಸಾಧ್ಯತೆಗಳು ಅಪಾರವಾಗಿದೆ. ಭಾರತದಂಥ ದೇಶದಲ್ಲಿ ಇದಕ್ಕೆ ಭವಿಷ್ಯ ಉಜ್ವಲವಾಗಿದೆ ಎಂದು ಅವರು ಹೇಳಿದರು. 2025ರ ವೇಳೆಗೆ ದಿನಕ್ಕೆ ಸರಾಸರಿ 100 ಕೋಟಿ ಯುಪಿಐ ವರ್ಗಾವಣೆಗಳು ನಡೆದರೆ ಅಚ್ಚರಿ ಇಲ್ಲ. ಖಂಡಿತವಾಗಿಯೂ ಸಾಧ್ಯವಿದೆ ಎಂದರು.
ಕಳೆದ 12 ತಿಂಗಳುಗಳಲ್ಲಿ ನಿತ್ಯ ಸರಾಸರಿ 36 ಕೋಟಿ ಯುಪಿಐ ವರ್ಗಾವಣೆಗಳು ನಡೆದಿವೆ ಎಂದು ಆರ್‌ಬಿಐನ ಇತ್ತೀಚಿನ ಅಂಕಿ ಅಂಶಗಳು ತಿಳಿಸಿವೆ.