ತುಮಕೂರು : ದೇವರಾಯನ ದುರ್ಗದ ಜಾತ್ರೆಗೆ ತೆರಳುತ್ತಿದ್ದ ವೇಳೆ ಬೆಂಕಿ ತಗುಲಿ ಯುವತಿ ಮೃತಪಟ್ಟಿದ್ದು ಇಬ್ನರು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಮಾನಸ ಹಾಗೂ ಆಕೆಯ ಸ್ನೇಹಿತರು , ಜಾತ್ರೆಗೆ ಕಾಲುದಾರಿಯ ಮೂಲಕ ತೆರಳುತ್ತಿದ್ದ ವೇಳೆ ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮಾನಸ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಅರಣ್ಯ ಅಧಿಕಾರಿಗಳು ಕಳೆದ ರಾತ್ರಿಯೂ ಸಹ ಬೆಟ್ಟದ ತಪ್ಪಲಿನ ಕೆಲವು ಭಾಗದಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತು. ಕಳೆದ ರಾತ್ರಿಯೂ ಸಹ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಮುಂದಾಗಿದ್ದರು. ಅದನ್ನು ತಿಳಿಯದೆ ಮಾನಸ ಹಾಗೂ ಕೆಲವರು ಕಾಲು ದಾರಿ ಬಳಸಿ ಜಾತ್ರೆಗೆ ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.