ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಮತ್ತೆ ಏರಿಕೆಯ ಹಾದಿ ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಹೊಸ ಪ್ರಕರಣ ಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,89,072ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,776ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,177ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,55,119ಕ್ಕೆ ತಲುಪಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,64,34,000 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.