Saturday, 23rd November 2024

ಅಧಿಕಾರದ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷ

ರಾಜ್ಯದಲ್ಲಿ 140 ಸ್ಥಾನದೊಂದಿಗೆ ಬಿಜೆಪಿ ಅಧಿಕಾರಕ್ಕೆ ಮಾಜಿ ಸಿಎಂ

ರಾಯಚೂರು : ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ. ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಅಪಹಾಸ್ಯ ಮಾಡಿದರು.

ಅವರಿಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ ಮಾಜಿ ಶಾಸಕ ಪಾಪರೆಡ್ಡಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ದೇಶದಲ್ಲಿ ಕಾಂಗ್ರೆಸ್‌ ಅಸ್ತಿತ್ವವನ್ನೇ ಕಳೆದುಕೊ೦ಡಿದೆ. 2023 ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟು ಗೆಲ್ಲುವ ನಿರೀಕ್ಷೆ ಹೊಂದಿದೆ.ಕೇ೦ದ್ರ ಮತ್ತು ರಾಜ್ಯ ದಲ್ಲಿ ಬಿಜೆಪಿ ಸರ್ಕಾರ ಡಬಲ್ ಇಂಜಿನ್ ಆಡಳಿತದಿಂದ ಕರ್ನಾಟಕದಲ್ಲಿ ಭಾರಿ ಅಭಿವೃದ್ಧಿ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅತ್ಯುತ್ತಮ ಆಡಳಿತ ನೀಡುವ ಮೂಲಕ ದೇಶವನ್ನು ರಕ್ಷಿಸುವು ದರೊಂದಿಗೆ ಆರ್ಥಿಕ ಮುನ್ನಡೆಗೆ ಮಹತ್ವದ ಪಾತ್ರ ಅಭಿವೃದ್ಧಿಯನ್ನು ವಹಿಸಿದ್ದಾರೆ.

ಬಸವಕಲ್ಯಾಣದಿಂದ ನಾಲ್ಕು ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭಗೊಂಡಿದೆ ರಾಜ್ಯದ ಎಲ್ಲಾ ಭಾಗಗಳನ್ನು ಯಾತ್ರೆಗಳು ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನರಿಗೆ ತಲುಪಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ದೇಶ ಮತ್ತು ರಾಜ್ಯಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಹೆದ್ದಾರಿಗಳ ಕಾಮಗಾರಿಗಳು ನಮ್ಮ ಅಭಿವೃದ್ಧಿಯ ಪ್ರತೀಕವಾಗಿವೆ. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅನೇಕ ಜನಪರ ಯೋಜನೆ ಘೋಷಣೆ ಮುಂದಿನ ಚುನಾವಣೆಯಲ್ಲಿ ಗೆಲುವಿಗೆ ಆಧಾರವಾಗಲಿದೆ.

ಈ ಸಂದರ್ಭದಲ್ಲಿ ಸಚಿವ ಶ್ರೀರಾಮುಲು ಸಿಟಿ ರವಿ ಶಾಸಕ ಡಾ ಶಿವರಾಜ ಪಾಟೀಲ್‌ ಮಾಜಿ ಶಾಸಕ ಎ. ಪಾಪರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.