ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಈ ಬೆಳವಣಿಗೆ ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ಸಂಚಲನ ತರಲಿದೆ. ಶಶಿಕಲಾ ಜೈಲಿನಿಂದ ಬಿಡುಗಡೆಯಾದರೆ, ಮುಂಬ ರಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ಇದರಿಂದ ಎಐಎಡಿಎಂಕೆ ಪಕ್ಷದ ಮತಗಳು ಇಬ್ಭಾಗ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಫೆಬ್ರವರಿ 27, 2022 ರಂದು ವಿ.ಕೆ.ಶಶಿಕಲಾ ಬಿಡುಗಡೆ ಸಾಧ್ಯತೆ ಇದೆ.
ನರಸಿಂಹ ಮೂರ್ತಿ ಎಂಬುವರು ಆರ್ ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಉತ್ತರ ನೀಡಿದ್ದಾರೆ.