ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆ ಗಳಲ್ಲಿ 444 ಹೊಸ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,90,936ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,782ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,809ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿ ಕೊಂಡವರ ಸಂಖ್ಯೆ 4,41,56,345ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 44,846 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 91,97,16,776 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,64, 55,841 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.