Friday, 22nd November 2024

ಲಾಲು ಯಾದವ್, ಪತ್ನಿ ರಾಬ್ರಿ ದೇವಿ, ಪುತ್ರಿ ಮಿಸಾ ಭಾರ್ತಿಗೆ ಜಾಮೀನು ಮಂಜೂರು

ವದೆಹಲಿ: ಉದ್ಯೋಗಕ್ಕಾಗಿ ಜಮೀನು ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ಸಿಬಿಐ ಕೋರ್ಟ್ ಜಾಮೀನು ನೀಡಿದೆ.

ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 29 ರಂದು ನಡೆಯಲಿದೆ.

ಮೂರು ತಿಂಗಳ ಹಿಂದೆ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ನಂತರ ಲಾಲು ಯಾದವ್ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾದಾಗ ಗಾಲಿ ಕುರ್ಚಿಯಲ್ಲಿ ಕೋರ್ಟ್‌ಗೆ ಬಂದರು. ಮಾಜಿ ಮುಖ್ಯಮಂತ್ರಿಗಳಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಅವರ ಕೆಲವು ಮಕ್ಕಳ ವಿರುದ್ಧ ಬಿಹಾರ ಉದ್ಯೋಗಕ್ಕಾಗಿ ಭೂಮಿ ಹಗರಣದ ತನಿಖೆ ನಡೆಯುತ್ತಿದೆ.

ಲಾಲು ಪ್ರಸಾದ್‌ ಯಾದವ್ ಮತ್ತು ಅವರ ಕುಟುಂಬ ಸದಸ್ಯರು 2004 ರಿಂದ 2009 ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ಭೂಮಿಯನ್ನು ಅಗ್ಗವಾಗಿ ಖರೀದಿಸಿ ದ್ದಾರೆ ಎಂದು ಆರೋಪಿಸಲಾಗಿದೆ.

ಲಾಲು ಪ್ರಸಾದ್‌ ಯಾದವ್‌ ಅವರು ಕುಟುಂಬ ವಂಚನೆ, ಕ್ರಿಮಿನಲ್‌ ಪಿತೂರಿ ಹಾಗೂ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿದೆ. ಲಾಲು ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಕ್ರಿಮಿನಲ್ ಪಿತೂರಿ, ವಂಚನೆ, ನಕಲಿ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಲೆಕ್ಕಕ್ಕೆ ಸಿಗದ ₹ 1 ಕೋಟಿ ನಗದು, 1,900 ಡಾಲರ್ ವಿದೇಶಿ ಕರೆನ್ಸಿ, 540 ಗ್ರಾಂ ಚಿನ್ನಾಭರಣ, ₹ 1.25 ಕೋಟಿ ಮೌಲ್ಯದ 1.5 ಕೆಜಿ ಚಿನ್ನಾಭರಣ ಮತ್ತು ಲಾಲು ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ಕೇಂದ್ರ ಸಂಸ್ಥೆ ಹೇಳಿದೆ.