Saturday, 23rd November 2024

ಹೈದ್ರಾಬಾದ್‍ನಲ್ಲಿ ಬಿ.ಎಲ್.ಸಂತೋಷ್ ಘೋಷಿತ ಅಪರಾಧಿ ಪೋಸ್ಟರು..!

ವದೆಹಲಿ: ಹೈದ್ರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಘೋಷಿತ ಅಪರಾಧಿ ಎಂಬ ಪೋಸ್ಟರುಗಳು ಎಲ್ಲೆಡೆ ರಾರಾಜಿಸುತ್ತಿವೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶ ನಾಲಯ ವಿಚಾರಣೆಗೆ ಒಳಪಡಿಸುವ ಮುನ್ನ ಹೈದರಾಬಾದ್‍ನಲ್ಲಿ ಇಂತಹ ಪೋಸ್ಟರ್‍ಗಳು ಕಂಡು ಬರುತ್ತಿವೆ.

ಹೈದರಾಬಾದ್‍ನ ಎರಡು ವಿಭಿನ್ನ ಸ್ಥಳಗಳಲ್ಲಿ ಪೋಸ್ಟರ್‍ಗಳು ಕಂಡುಬಂದಿವೆ. ಇದರ ಜತೆಗೆ ಕವಿತಾ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಬಿಆರ್‍ಎಸ್ ಪಕ್ಷದ ಶಾಸಕರು ಹಾಗೂ ಸಚಿವರು ಇಂದು ದೆಹಲಿಯಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು.

ಪಕ್ಷದ ಅತ್ಯಂತ ಪ್ರಮುಖರಲ್ಲಿ ಒಬ್ಬರಾದ ಕೆ ಕವಿತಾ ಅವರೊಂದಿಗೆ ಒಗ್ಗಟ್ಟಿನಿಂದ ಬಿಆರ್‍ಎಸ್ ಸಚಿವರು ಮತ್ತು ಉನ್ನತ ನಾಯಕರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ.ಇದೇ ಪ್ರಕರಣದಲ್ಲಿ ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯವು ಬಿಆರ್‍ಎಸ್ ನಾಯಕಿಯನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು. ಇಂದು ಮೂರನೇ ಬಾರಿಗೆ ಅವರಿಗೆ ಸಮನ್ಸ್ ನೀಡಲಾಗಿದೆ.