ತೆಲಂಗಾಣ: ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದ ಶಾಸ್ತ್ರಿಪುರಂನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನಲ್ಲಿದ್ದ ಎರಡು ಡಿಸಿಎಂ ವಾಹನಗಳು ಸುಟ್ಟು ಕರಕಲಾಗಿವೆ.
ಬೆಂಕಿಯ ಜತೆಗೆ ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. 10 ಅಗ್ನಿಶಾಮಕ ಯಂತ್ರಗಳೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮತ್ತೊಂದೆಡೆ ಬೆಂಕಿ ಅವಘಡ ಸಂಭವಿಸಿದ ಪ್ರದೇಶದ ಶಾಲೆಯಲ್ಲಿ ಪಿಯುಸಿ ಪರೀಕ್ಷಾ ಕೇಂದ್ರವೂ ಇರುವುದರಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಅಗ್ನಿ ಅವಘಡದ ಪಕ್ಕದಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಇದೆ. ಅಧಿಕಾರಿಗಳು ಶಾಲಾ ಮಕ್ಕಳನ್ನು ಅಲ್ಲಿಂದ ಸ್ಥಳಾಂತರಿಸಿದರು.