ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ ತಲಾ ಒಬ್ಬರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,30,806 ಕ್ಕೆ ಏರಿಕೆಯಾಗಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೈನಂದಿನ ಪಾಸಿಟಿವಿಟಿ ದರ ಶೇ 2.08ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.86ರಷ್ಟಿದೆ. ದೇಶದಾದ್ಯಂತ ಈವರೆಗೆ 4,46,96,338 ಮಂದಿಗೆ ಸೋಂಕು ತಲುಲಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ 98.8ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 44,225 ಪರೀಕ್ಷೆ ಗಳೊಂದಿಗೆ ಈವರೆಗೆ 92.03 ಕೋಟಿಗೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.