ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಮುಖ ಇ-ಕಾಮರ್ಸ್ ಕಂಪನಿ ಅಮೆಜಾನ್ ಸೇರಿ ದಂತೆ ಎಚ್ಪಿ, ಫಿಲಿಪ್ಸ್, ಡಿಸ್ನಿ, ಝುಮ್, ಮೆಟಾ, ಮತ್ತು ಟ್ವಿಟರ್ನಂತಹ ಕಂಪನಿಗಳು ಕೂಡ ವೆಚ್ಚ ಕಡಿತದ ಮೊರೆ ಹೋಗಿವೆ.
ಗೂಗಲ್ ಕಂಪನಿಯು ಒಟ್ಟು 12 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಇತ್ತೀಚೆಗೆ ಘೋಷಿಸಿತ್ತು. ಜಾಗತಿಕವಾಗಿ ಆರ್ಥಿಕ ಹಿಂಜರಿತ ಎದುರಾಗಬಹುದು ಎಂಬ ಭೀತಿಯ ನಡುವೆ ನೌಕರರನ್ನು ಕೆಲಸದಿಂದ ತೆಗೆಯುತ್ತಿರುವ ತಂತ್ರಜ್ಞಾನ ಕಂಪನಿಗಳ ಸಾಲಿಗೆ ಈಗ ಗೂಗಲ್ ಕೂಡ ಸೇರಿದೆ.
ಫೇಸ್ಬುಕ್ ಮಾಲೀಕತ್ವದ ಮೆಟಾ ಕಂಪನಿಯು 11 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿತ್ತು. ಟ್ವಿಟರ್ ಕಂಪನಿಯು ಉದ್ಯಮಿ ಇಲಾನ್ ಮಸ್ಕ್ ಅವರ ತೆಕ್ಕೆಗೆ ಸೇರಿದ ನಂತರದಲ್ಲಿ ಶೇ.50ರಷ್ಟು ನೌಕರರನ್ನು ಕೆಲಸದಿಂದ ತೆಗೆದು ಹಾಕಿದೆ.