Friday, 22nd November 2024

ಮೇ.10ರಂದು ಕರ್ನಾಟಕದ ವಿಧಾನಸಭಾ ಚುನಾವಣೆ, 13ರಂದು ಕೌಂಟಿಂಗ್

ಬೆಂಗಳೂರು: ರ್ನಾಟಕದ ವಿಧಾನಸಭಾ ಚುನಾವಣೆ ಮೇ 10ರಂದು ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣಾ ಹಾಗೂ ಮತಎಣಿಕೆಯ ದಿನಾಂಕವನ್ನು ಘೋಷಿಸಿದೆ.

ಮೇ.10 ರಂದು ಚುನಾವಣೆ ಹಾಗೂ ಮೇ 13ರಂದು ಕೌಂಟಿಂಗ್ ನಡೆಯಲಿದೆ.

  • ರಾಜ್ಯದಲ್ಲಿ ಒಟ್ಟು 2,62,422,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಹಾಗೂ 4,699ತೃತೀಯ ಲಿಂಗಿ ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರು ಇದ್ದಾರೆ ಎಂದು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
  • ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ.
  • ಒಟ್ಟಾರೆ 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ನಗರದಲ್ಲಿ 24,063 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ ವ್ಯವಸ್ಥೆ ಮಾಡಲಾಗಿದೆ.
  • ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ವಿಮಾನ ನಿಲ್ದಾಣ, ಹೆದ್ದಾರಿಗಳು, ಬಂದರುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.
  • ಈ ಬಾರಿ ರಾಜ್ಯದ 224 ಕ್ಷೇತ್ರದಲ್ಲೂ ಒಂದೇ ಹಂತದ ಮತದಾನ ನಡೆಯಲಿದೆ.
  • ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕಡೇ ದಿನ.