Monday, 25th November 2024

ಮಂಡ್ಯ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್‌ ರಾಜಕೀಯ ನಿವೃತ್ತಿ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್‌ ಅವರು ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ನೀಡಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ರಾಜಕಾರಣಕ್ಕೆ ಬರುವ ಮೊದಲು ವಕೀಲರಾಗಿದ್ದ ಅವರು ಸಕ್ರಿಯ ರಾಜಕಾರಣ ಕುರಿತು ಯೋಚಿಸುತ್ತಿರುವಾಗಲೇ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಯುತ್ತದೆ.

ಚುನಾವಣೆಯಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿದ್ದರು. ಅಲ್ಲಿಂದ ಆರು ಸಲ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಆಯ್ಕೆಗೊಂಡು ಆ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿ ದ್ದಾರೆ.

ಗುರುವಾರ ಘೋಷಣೆಯಾದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ. ಎಂ ಶ್ರೀನಿವಾಸ್‌ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದರಿಂದ ಕೆವಿ ಶಂಕರೇಗೌಡರ ಮೊಮ್ಮಗ ಕೆಎಸ್‌ ವಿಜಯಾನಂದ ಹೆಸರು ಮುನ್ನೆಲೆಗೆ ಬಂದಿದೆ. ಇವರು ಕ್ಷೇತ್ರದಲ್ಲಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಯಾಗಿದ್ದಾರೆ. ಮನ್ಮುಲ್‌ ಅಧ್ಯಕ್ಷ ಬಿಆರ್‌ ರಾಮಚಂದ್ರ, ಮುದ್ದನಘಟ್ಟ ಮಹಾಲಿಂಗೇಗೌಡ ಕೂಡ ಆಕಾಂಕ್ಷಿ ಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಬರೋಬ್ಬರಿ 16 ಮಂದಿ ಅರ್ಜಿ ಹಾಕಿದ್ದಾರೆ. ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿರುವ ಕೆಕೆ ರಾಧಾಕೃಷ್ಣ ಕೀಲಾರ, ಕಾವೇರಿ ಆಸ್ಪತ್ರೆ ಮುಖ್ಯಸ್ಥ ಎಚ್‌ಬಿ ರಾಮು, ಮನ್ಮುಲ್‌ ನಿರ್ದೇಶಕ ಯುಸಿ ಶಿವಕುಮಾರ್‌, ಎಂಎಸ್‌ ಚಿದಂಬರ್‌, ಅಮರಾವತಿ ಚಂದ್ರಶೇಖರ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಂಜನಾ ಶ್ರೀಕಾಂತ್‌ ಸೇರಿದಂತೆ ಇನ್ನೂ ಹಲವರು ಪಟ್ಟಿಯಲ್ಲಿದ್ದಾರೆ.