Monday, 16th September 2024

ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ: ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ 2ನೇ ಪಟ್ಟಿ ಬಿಡು ಗಡೆ ಮಾಡಿದ್ದು, ಈ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟವಾಗಿದೆ. ಈ ಹಿನ್ನೆಲೆ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿತ್ರದುರ್ಗ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಇದೀಗ ರಘು ಆಚಾರ್ ಜೆಡಿಎಸ್ ಕದ ತಟ್ಟಿದ್ದಾರೆ. .ಏಪ್ರಿಲ್ 14 ರಂದು ರಘು ಆಚಾರ್ ಜೆಡಿಎಸ್ ಸೇರ್ಪಡೆಯಾಗಲಿದ್ದು, ಈಗಾಗಲೇ ಕುಮಾರ ಸ್ವಾಮಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇಡೀ ರಾಜ್ಯ ಸುತ್ತಿ ಕಾಂಗ್ರೆಸ್ಸಿಗೆ ಮತ ಹಾಕದಂತೆ ವಿಶ್ವಕರ್ಮ ಸಮಾಜದಿಂದ ಹೋರಾಟ ಮಾಡುತ್ತೇನೆ. ಸಿದ್ದರಾಮಯ್ಯ ನನ್ನನ್ನು ನಂಬಿಸಿ ಅರ್ಧ ದಾರಿಯಲ್ಲಿ ಕತ್ತು ಕೊಯ್ದುರು. ಏ.17ರಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಚಿತ್ರದುರ್ಗ ಕ್ಷೇತ್ರದ ಟಿಕೆಟ್ ವಂಚಿತ ರಘು ಆಚಾರ್ ಹೇಳಿದ್ದಾರೆ.

ಚಿತ್ರದುರ್ಗ, ಕಲಘಟಕಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿ ದ್ದಾರೆ. ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ ಹಿನ್ನೆಲೆ ‘ ಛಬ್ಬಿ’ ಅಸಮಾಧಾನಗೊಂಡಿದ್ದು, ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಳ ಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಶೋಕ್ ಪೂಜಾರಿಗೆ ಟಿಕೆಟ್ ನೀಡದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.