ನವದೆಹಲಿ : ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಜೈಲಿನಲ್ಲಿರುವ ಸಿಸೋಡಿಯಾ ಬರೆದಿರುವ ಪತ್ರದ ಪ್ರತಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ಸಿಸೋಡಿಯಾ ಅವರು ಪ್ರಧಾನಿ ಮೋದಿ ಯವರನ್ನು ವ್ಯಂಗ್ಯವಾಡಿದ್ದಾರೆ.
ನಾನು ಅಷ್ಟು ವಿದ್ಯಾವಂತನಲ್ಲ ಎಂದು ಪ್ರಧಾನಿ ಮೋದಿ ಹೇಳುತ್ತಿರುವ ವಿಡಿಯೋವನ್ನು ನಾನು ನೋಡಿದ್ದೇನೆ. ಅವರು ತಮ್ಮ ಶಿಕ್ಷಣವನ್ನು ಹಳ್ಳಿಯ ಶಾಲೆಯಲ್ಲಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಒಬ್ಬರು ಅವಿದ್ಯಾವಂತ ಅಥವಾ ಕಡಿಮೆ ಶಿಕ್ಷಣ ಪಡೆದ ವರು ಎಂದು ಹೇಳುವುದು ಹೆಮ್ಮೆಯ ಭಾವನೆಯೇ ಎಂದು ಪ್ರಶ್ನಿಸಿದ್ದಾರೆ.
ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರಿ ಶಾಲೆಗಳ ಸಂಖ್ಯೆಯೂ ಹೆಚ್ಚಾಗಬೇಕು. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಸುಧಾ ರಿಸಿದರೆ, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಕರೆದುಕೊಂಡು ಬಂದು ಸರ್ಕಾರಿ ಶಾಲೆಗೆ ಸೇರಿಸಬಹುದು. ಆದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಅಪಾಯಕಾರಿ. ದೇಶಾದ್ಯಂತ 60,000 ಶಾಲೆಗಳನ್ನು ಮುಚ್ಚಲಾಗಿದೆ. ಇದು ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುವುದಿಲ್ಲ ಎಂಬುದನ್ನು ತೋರಿಸುತ್ತದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗದಿದ್ದರೆ ದೇಶ ಪ್ರಗತಿ ಹೊಂದುತ್ತದೆಯೇ ಎಂದು ಪ್ರತಿಪಾದಿಸಿದ್ದಾರೆ.