ಅರ್ಹ ಮತದಾರರು, ಮತದಾರರ ಯಾದಿಯಲ್ಲಿ ಹೆಸರುಗಳ ಸೇರ್ಪಡೆಯಾಗಿರುವ ಬಗ್ಗೆ https://ceo.karnataka.gov.in, https://www.nvsp.in ವೆಬ್‌ಸೈಟ್‌ಗಳಲ್ಲಿ ಹಾಗೂ Voter Helpline ಆಪ್‌ನಲ್ಲಿ ಮತ್ತು ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲಿ ಸಿಕೊಳ್ಳಬಹುದಾಗಿದೆ.
ಒಂದು ವೇಳೆ ಮತದಾರರ ಯಾದಿಯಲ್ಲಿ ಅರ್ಹ ಮತದಾರರ ಹೆಸರುಗಳು ಸೇರ್ಪಡೆ ಯಾಗದೇ ಇದ್ದಲ್ಲಿ, ಅಂಥಹ ಅರ್ಹ ಮತದಾರರು ದಿನಾಂಕ:10.04.2023 ರೊಳಗೆ https://www.nvsp.in ವೆಬ್‌ಸೈಟ್ ನಲ್ಲಿ ಅಥವಾ Voter Helpline ಆಪ್‌ನಲ್ಲಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 10 ರ ನಂತರ ನಮೂನೆ-6 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಈ ಚುನಾವಣೆ ಮುಗಿದ ನಂತರ ಮತದಾರರ ಯಾದಿ ಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.