ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,56,616ಕ್ಕೆ ಏರಿಕೆ ಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,965ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,814ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,92,837ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,57,894 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,27,71,410 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,23,322 ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.