ಮಂಗಳೂರು: ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ನಾಳೆ (ಏ.10) ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ ಪಕ್ಷದ ಶಾಸಕರು, ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಮತ್ತು ಹಿತೈಷಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಂತೆ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರವಾಗಿ ಈ ಕೇಂದ್ರ ಕಾರ್ಯಾಚರಿಸಲಿದೆ.
ನಗರದ ಲಾಲ್ಬಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ನಲ್ಲಿ ವಿಭಾಗ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ.