Thursday, 19th September 2024

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು

ವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಂಬಂಧ, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸತತ 2 ಗಂಟೆ ನಡೆದಂತ ಸಭೆ ಅಂತ್ಯಗೊಂಡ ಬಳಿಕ, ಅಂತಿಮವಾಗಿ ಇಂದು ಮತ್ತೊಂದು ಸುತ್ತಿನ ಸಭೆ ಬಳಿಕ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಅಂತಿಮವಾಗಿ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಒಟ್ಟಾರೆ ಸೋಮವಾರದ ಬಿಜೆಪಿ ಸಿಇಸಿ ಸಭೆಯ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ.