ನವದೆಹಲಿ: ಬುಧವಾರ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರಾಜಸ್ಥಾನದ ಜೈಪುರ ಮತ್ತು ದೆಹಲಿ ಕ್ಯಾಂಟ್ ನಡುವೆ ಸಂಚರಿಸಲಿದೆ.
ಈ ಸೇವೆಯು ಏಪ್ರಿಲ್ 13 ರಿಂದ ಪ್ರಾರಂಭವಾಗಲಿದೆ. ಜೈಪುರ, ಅಲ್ವಾರ್ ಮತ್ತು ಗುರ್‌ಗಾಂವ್‌ನಲ್ಲಿ ನಿಲುಗಡೆಗಳೊಂದಿಗೆ ಅಜ್ಮೀರ್ ಮತ್ತು ದೆಹಲಿ ಕ್ಯಾಂಟ್ ನಡುವೆ ಕಾರ್ಯನಿರ್ವಹಿಸುತ್ತದೆ.
ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ಗಾಗಿ ರೂಪಿಸಲಾದ ವೇಳಾಪಟ್ಟಿಯ ಪ್ರಕಾರ ಇದು ದೆಹಲಿ ಕ್ಯಾಂಟ್ ಮತ್ತು ಅಜ್ಮೀರ್ ನಡುವಿನ ಅಂತರವನ್ನು 5 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ.