ನವದೆಹಲಿ: ದೇಶದಾದ್ಯಂತ ಬುಧವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 7,830 ಕೋವಿಡ್ ಪ್ರಕರಣಗಳು ವರದಿಯಾಗಿದ್ದು,16 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಕಳೆದ ಏಳು ತಿಂಗಳಲ್ಲೇ (223 ದಿನ) ಗರಿಷ್ಠ ಕರೋನಾ ಸೋಂಕು ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 1ರಂದು ದೇಶದಲ್ಲಿ 7,946 ಪ್ರಕರಣ ದಾಖಲಾಗಿತ್ತು.
ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೆ 4.47 ಕೋಟಿ (4,47,76,002) ಮಂದಿಗೆ ಕರೋನಾ ಸೋಂಕು ತಗುಲಿದ್ದು, ಒಟ್ಟು 5,31,016 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 220.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.