ಬಿಜೆಪಿ ಕಚೇರಿಯಲ್ಲಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಇದರ ಬೆನ್ನಲ್ಲೇ ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಾಗೋಡು ತಿಮ್ಮಪ್ಪ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು.
ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರ ಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ. ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.