Saturday, 23rd November 2024

ನೋಯ್ಡಾದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ನೋಯ್ಡಾ ಮತ್ತು ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ನೋಯ್ಡಾದಲ್ಲಿ ಮಾಲ್‌ಗಳು/ಸಿನಿಮಾ ಹಾಲ್‌ಗಳಿಗಾಗಿ ಮಾರ್ಗಸೂಚಿಗಳು

-ಮಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಸಿನಿಮಾ ಹಾಲ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಕಡ್ಡಾಯ

-ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿರಬೇಕು.

-ಗ್ರಾಹಕರು ಶಾಪಿಂಗ್ ಮಾಡುವಾಗ ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಬೇಕು.

-ಎಸ್ಕಲೇಟರ್‌ಗಳು, ಬಾಗಿಲುಗಳು, ರೇಲಿಂಗ್‌ಗಳು, ಎಲಿವೇಟರ್‌ಗಳು ಮತ್ತು ಪಾರ್ಕಿಂಗ್ ಪ್ರದೇಶಗಳಂತಹ ಹೈ-ಟಚ್ ಮೇಲ್ಮೈಗಳನ್ನು ನಿಯಮಿತವಾಗಿ ಸ್ಯಾನಿಟೈಸ್ ಮಾಡಬೇಕು.

ಶಾಲೆ ಮತ್ತು ಕಾಲೇಜುಗಳಿಗೆ ಕೋವಿಡ್ ಮಾರ್ಗಸೂಚಿಗಳು

-ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲಾ/ಕಾಲೇಜು ಆವರಣದೊಳಗೆ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಬೇಕು.

-ತರಗತಿಗಳು ಮತ್ತು ಸಾಮಾನ್ಯ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಾಕಷ್ಟು ದೈಹಿಕ ಅಂತರ ನಿರ್ವಹಿಸಬೇಕು.

-ಕೈತೊಳೆಯುವ ಸೋಪು ಮತ್ತು ನೀರು ಅಥವಾ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆಗಳನ್ನು ಶಾಲಾ/ಕಾಲೇಜುಗಳಲ್ಲಿ ಲಭ್ಯವಾಗುವಂತೆ ಮಾಡಬೇಕು.

-ಯಾವುದೇ ವಿದ್ಯಾರ್ಥಿಗೆ ಕೆಮ್ಮು, ನೆಗಡಿ, ಜ್ವರ ಮುಂತಾದ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಶಾಲಾ/ಕಾಲೇಜಿಗೆ ಕಳುಹಿಸದೆ ವೈದ್ಯರ ಸಲಹೆ ಪಡೆದು ಚಿಕಿತ್ಸೆ ಪಡೆಯಬೇಕು.