Friday, 22nd November 2024

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಮಾಣ ವಚನ ಸ್ವೀಕಾರ

ನವದೆಹಲಿ:ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನದ ಆರನೇ ದಿನದ ಕಲಾಪ ಇಂದು ಸಮಾವೇಶಗೊಳ್ಳಲಿದ್ದು, ಬೆಳಗ್ಗೆ ದೇವೇಗೌಡರು ಮೇಲ್ಮನೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ, ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಪ್ರಮಾಣವಚನ ಬೋಧಿಸಿದ್ದಾರೆ.

ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗೆ ಜೂನ್ 12 ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 87 ವರ್ಷದ ದೇವೇ ಗೌಡರು ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.