ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,18,115ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,114ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,542ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,79,853 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,40,57,685 ಮಂದಿಯನ್ನು ಪರೀಕ್ಷೆಗೊಳಪಡಿಸ ಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,26,324 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ