Friday, 22nd November 2024

ಕೇರಳದಲ್ಲಿ ನಾಳೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ

ವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವ ನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ.

ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ.

ಅ.25ರಂದು ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 3,200 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆ ಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳ ಮೂಲಕ ಕೊಚ್ಚಿ ಸುತ್ತಮುತ್ತಲಿನ 10 ದ್ವೀಪಗಳನ್ನು ಸಂಪರ್ಕಿಸುವ ಕೊಚ್ಚಿ ವಾಟರ್ ಮೆಟ್ರೋವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.