Sunday, 24th November 2024

ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ

ಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

‘ಡಯಲ್ 112’ (ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ) ಸಂದೇಶದ ಮೂಲಕ ಬೆದರಿಕೆ ಯನ್ನು ಸ್ವೀಕರಿಸಲಾಗಿದೆ. ಅದರಲ್ಲಿ ವ್ಯಕ್ತಿ ‘ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ’ ಎಂದು ಹೇಳಿದ್ದಾನೆ.

ಬೆದರಿಕೆ ಬಂದ ನಂತರ, ‘112’ ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ‘ಡಯಲ್ 112′ ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.