Tuesday, 26th November 2024

9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,398 ಜನರು ಕೋವಿಡ್ ನಿಂದ ಮೃತ ಪಟ್ಟಿದ್ದಾರೆ.

ದೇಶದಲ್ಲಿ 61,013 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,23,045 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,66,50,086 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,79,031 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.