ದಂಗೆ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ ಎಂಬ ವರದಿಯನ್ನಾಧರಿಸಿ ಚುರಾಚಂದ್ ಪುರ ಜಿಲ್ಲೆಯಲ್ಲಿ ದೊಡ್ಡ ಸಭೆಗಳು ಹಾಗೂ ಅಂತರ್ಜಾಲ ಸೌಲಭ್ಯವನ್ನು ನಿಷೇಧಿಸ ಲಾಗಿದೆ.
ಜಿಲ್ಲೆಯಲ್ಲಿ ಶಾಂತಿ ಭಂಗ, ಸಾರ್ವಜನಿಕ ನೆಮ್ಮದಿಗೆ ಭಂಗ ಮತ್ತು ಮಾನವ ಜೀವ ಮತ್ತು ಆಸ್ತಿಗಳಿಗೆ ಗಂಭೀರ ಅಪಾಯ ಎಂಬ ಪೊಲೀಸ್ ವರದಿಯನ್ನು ಉಲ್ಲೇಖಿಸಿ ದೊಡ್ಡ ಸಭೆಗಳನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಚುರಾಚಂದ್ಪುರ ಜಿಲ್ಲೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರು ಇಂದು ಜಿಮ್ ಮತ್ತು ಕ್ರೀಡಾ ಸೌಲಭ್ಯವನ್ನು ಉದ್ಘಾಟಿಸಬೇಕಿತ್ತು. ಆದರೆ, ಸಿಎಂ ಭಾಗವಹಿಸುವ ಸಭಾಂಗಣಕ್ಕೆ ನುಗ್ಗಿದ ಜನ ಸಮೂಹ ಕುರ್ಚಿಗಳನ್ನು ಎಸೆದು ಷಾಮಿ ಯಾನಕ್ಕೆ ಹಾಗೂ ಕ್ರೀಡಾ ಸಾಮಗ್ರಿಗಳಿಗೆ ಬೆಂಕಿ ಇಟ್ಟಿದೆ.