ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ಶನಿವಾರ ಕಟ್ಟಡವೊಂದು ಕುಸಿದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಿಸಲಾಗುತ್ತಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 15 ರಿಂದ 20 ಜನರು ಸಿಲುಕಿರುವ ಶಂಕೆ ಇದ್ದು, ಸ್ಥಳೀಯರು ಅಗ್ನಿಶಾಮಕ ಮತ್ತು ವಿಪತ್ತು ಇಲಾಖೆಗೆ ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.
ಸ್ಥಳೀಯರ ಪ್ರಕಾರ, 15 ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಗ್ರೌಂಡ್ ಪ್ಲಸ್ 2 ಅಂತಸ್ತಿನ ಕಟ್ಟಡ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಎನ್ಡಿಆರ್‌ಎಫ್ ಮತ್ತು ಪೊಲೀಸರ ವಿಪತ್ತು ತಂಡಗಳು ಸ್ಥಳಕ್ಕೆ ತಲುಪಿವೆ. ಸ್ಥಳೀಯರ ಪ್ರಕಾರ, ನಾಲ್ಕು ಕುಟುಂಬಗಳು ಕೆಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.