ಹೂಸ್ಟನ್ (ಅಮೆರಿಕ) : ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ.
ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿ ದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾ ಧೀಶರಾಗಿ ಕೆಲಸ ಮಾಡುತ್ತಿದ್ದಾರೆ. ಶಾಪಿಂಗ್ ಮಾಲ್ಗೆ ತೆರಳಿದ್ದಾಗ ಕಪ್ಪು ಕಾರಿನಲ್ಲಿ ಬಂದ ದುಷ್ಕರ್ಮಿ ಅಂಗಡಿಗಳ ಹೊರಗಿನಿಂದ ಗುಂಡಿನ ದಾಳಿ ನಡೆಸಿದ್ದ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ದಾಳಿಕೋರನ ಮೇಲೆ ಪ್ರತಿದಾಳಿ ನಡೆಸಿದ್ದರು.
ಆರೋಪಿ ಸಾವನ್ನಪ್ಪಿದ ಬಳಿಕ ಸ್ಥಳಕ್ಕಾಗಮಿಸಿದ ಆಯಂಬುಲೆನ್ಸ್ ಸಿಬ್ಬಂದಿ ಗಾಯಾಳು ಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಗಾಯಾಳುಗಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಟೆಕ್ಸಾಸ್‌ನ ಮಾಲ್‌ನಲ್ಲಿ ಗುಂಡಿನ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಗುಂಡಿನ ಚಕಮಕಿ ವೇಳೆ ನೂರಾರು ಜನರು ಓಡಿಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕೆಲವರು ಹೆದರಿ ಅಲ್ಲೇ ಅಡಗಿಕೊಂಡಿದ್ದರು.