Friday, 22nd November 2024

ನಾಳೆ ಮತದಾನ: ಮೆಟ್ರೋ ಸಂಚಾರ ಮಧ್ಯರಾತ್ರಿಯವರೆಗೆ ವಿಸ್ತರಣೆ

ಬೆಂಗಳೂರು: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ಸಂಚಾರವನ್ನು ವಿಸ್ತರಣೆ ಮಾಡಿದೆ.

ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬುಧವಾರ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ನಿಗಮವು ಮೆಟ್ರೋ ರೈಲು ಸೇವೆ ಗಳನ್ನು ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದಿದೆ.

ಟರ್ಮಿನಲ್ ನಿಲ್ದಾಣಗಳಾದ ಬೈಯ್ಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ ( ಕಾಡಗೋಡಿ)ಗಳಿಂದ ಕೊನೆಯ ರೈಲು ಸೇವೆ ಮೇ.11 ರಂದು ಮಧ್ಯರಾತ್ರಿ 12.05ಗಂಟೆಗೆ ಹೊರಡಲಿದೆ ಎಂದು ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ ಕೊನೆಯ ರೈಲು ಸೇವೆಯು ದಿನಾಂಕ 11-05-2023ರಂದು ಮಧ್ಯರಾತ್ರಿ 12.05 ಗಂಟೆಗೆ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆಯಿಂದ ಹೊರಡಲಿದೆ.