Monday, 16th September 2024

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ವದೆಹಲಿ: ದೇಶದ ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ತನಿಖೆ ನಡೆಸಲು ಎಸ್‌ಐಟಿ ತಂಡವನ್ನು ರಚಿಸ ಲಾಗಿದೆ.

ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಬುಧವಾರ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ನಂತರ ಅವರು ನಿರಪರಾಧಿ ಎಂಬ ವಿಶ್ವಾಸವಿದ್ದರೆ ಸುಳ್ಳು ಪತ್ತೆ ನಾರ್ಕೋ ಪರೀಕ್ಷೆಗೆ ಒಳಗಾಗುವಂತೆ ಸವಾಲು ಹಾಕಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ಸಂಘಟನೆಯಲ್ಲಿ ತೊಡಗಿಸಿಕೊಂಡರೆ ಸ್ಪರ್ಧೆಗಳನ್ನು ನಡೆಸುವುದನ್ನು ವಿರೋಧಿಸುತ್ತೇವೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಹೇಳಿದ್ದಾರೆ.

ಎಲ್ಲಾ ಸ್ಪರ್ಧೆಗಳು ಐಒಎಯ ತಾತ್ಕಾಲಿಕ ಪ್ಯಾನೆಲ್ ಅಡಿಯಲ್ಲಿ ನಡೆಯಬೇಕೆಂದು ನಾವು ಬಯಸುತ್ತೇವೆ. ಡಬ್ಲ್ಯುಎಫ್‌ಐ ಮುಖ್ಯಸ್ಥರು ಯಾವುದೇ ರೀತಿಯಲ್ಲಿ ಭಾಗಿಯಾಗಿದ್ದರೆ, ನಾವು ಅದನ್ನು ವಿರೋಧಿಸುತ್ತೇವೆ ಎಂದು ಇನ್ನೊಬ್ಬ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಹಾಕಿರುವ ಆರೋಪದಲ್ಲಿ ಬ್ರಿಜ್‌ ಭೂಷಣ್‌ ಸಿಂಗ್ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.