ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿ ಯಿಂದ ನನ್ನ ತಂದೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದಾರೆ. ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡಿದ್ದಾರೆ. ಜೆಡಿಎಸ್‌ನಿಂದ ಡಾ ಭಾರತಿ ಶಂಕರ್ ಅವರು ಸ್ಪರ್ಧೆ ಮಾಡಿದ್ದಾರೆ.
ರಾಜ್ಯದ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದ್ದ ವರುಣಾದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿತ್ತು. ಕಳೆದ ಬಾರಿ ವರುಣಾದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. 2008 ಹಾಗೂ 2013ರಲ್ಲಿ ವರುಣಾದಲ್ಲಿ ಎರಡು ಬಾರಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು.
2008ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು 71,000 ಮತಗಳನ್ನು ಪಡೆದು 18,837 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು,. ಬಿಜೆಪಿಯಿಂದ ಎಲ್. ರೇವಣಸಿದ್ದಯ್ಯ ಅವರು ಸ್ಪರ್ಧೆ ಮಾಡಿದ್ದು, 53,071 ಮತಗಳನ್ನು ಪಡೆದಿ ದ್ದರು.
ಜೆಡಿಎಸ್‌ನಿಂದ ಎಚ್‌ವಿ ಕೃಷ್ಣಮೂರ್ತಿ ಅವರು 4,133 ಪಡೆದಿದ್ದರು. ಇಲ್ಲಿ ಸಿದ್ದರಾಮಯ್ಯ ಅವರು ಶೇಕಡ 50.23ರಷ್ಟು ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಎಲ್ ರೇವಣಸಿದ್ದಯ್ಯ ಅವರು 37.07% ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್‌ನ ಕೃಷ್ಣಮೂರ್ತಿ ಅವರು ಕೇವಲ ಶೇಕಡ 2.89ರಷ್ಟು ಮತಗಳನ್ನು ಪಡೆದಿದ್ದರು.