Friday, 22nd November 2024

ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ

ಕೊರಟಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಕೆಲವೇ ಕ್ಷಣ ಗಳಲ್ಲಿ ಹೊರಬೀಳಲಿದೆ.

ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿ ದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿಎಚ್ ಅನಿಲ್ ಕುಮಾರ್ ಸ್ಪರ್ಧಿಸಿದ್ದರೆ, ಜೆಡಿಎಸ್‌ನಿಂದ ಸುಧಾಕರ್ ಲಾಲ್ ಕಣಕ್ಕಿಳಿದಿದ್ದಾರೆ.

ರಾಜ್ಯದ ಹೈ-ವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸ್ಪರ್ಧಿಸಿರುವುದು ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ.

ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹಾಲಿ ಶಾಸಕ ಜಿ.ಪರಮೇಶ್ವರ್ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಜಿ. ಅನಿಲ್ ಕುಮಾರ್ ಕಣಕ್ಕಿಳಿದಿದ್ದಾರೆ. ಇನ್ನು ಜೆಡಿಎಸ್‌ನಿಂದ ಸುಧಾಕರ್ ಲಾಲ್ ಅವರು ಮತ್ತೆ ಎದುರಾಳಿಯಾಗಿದ್ದಾರೆ.

ಕಳೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕೊರಟಗೆರೆ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡು ಬಾರಿ ಹಾಗೂ ಜೆಡಿಎಸ್ ಒಂದು ಬಾರಿ ಗೆಲುವು ಸಾಧಿಸಿವೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

1999 ಮತ್ತು 2004ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್​ ಪಕ್ಷದ ಸಿ. ಚನ್ನಿಗಪ್ಪ ಆಯ್ಕೆಯಾಗಿದ್ದರು. 2008ರ ಚುನಾವಣೆ ಯಲ್ಲಿ ಜೆಡಿಎಸ್​ನ ಚಂದ್ರಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ಡಾ.ಜಿ.ಪರಮೇಶ್ವರ್ ಅವರು 11 ಸಾವಿರ ಮತಗಳ ಅಂತರದ ಗೆಲುವು ಸಾಧಿಸಿದ್ದರು.

2013ರ ಚುನಾವಣೆಯಲ್ಲಿ ಜೆಡಿಎಸ್​ನ ಸುಧಾಕರ್ ಲಾಲ್ ಅವರು ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಅವರನ್ನು 18 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು.