Friday, 22nd November 2024

ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ: ಸೆಕ್ಷನ್ 144 ಜಾರಿ

ಕೋಲಾ: ಸಾಮಾಜಿಕ ಮಾಧ್ಯಮ ಪೋಸ್ಟ್‌ ಗೆ ಸಂಬಂಧಿಸಿ ಮಹಾರಾಷ್ಟ್ರದ ಅಕೋಲಾ ನಗರದಲ್ಲಿ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ್ದು, ಕೆಲವು ಭಾಗಗಳಲ್ಲಿ ಜನರು ಕಾನೂನುಬಾಹಿರವಾಗಿ ಒಟ್ಟುಗೂಡುವುದನ್ನು ತಡೆಯಲು ಸೆಕ್ಷನ್ 144 ಅನ್ನು ವಿಧಿಸಲಾಗಿದೆ.

ಸೂಕ್ಷ್ಮ ಓಲ್ಡ್ ಸಿಟಿ ಪ್ರದೇಶದಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಇಬ್ಬರು-ಮೂರು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿ ರುವ ಶಂಕೆ ಇದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಮೋನಿಕಾ ರಾವುತ್ ಹೇಳಿದ್ದಾರೆ,

ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ವಾಹನ ಗಳಿಗೂ ಹಾನಿಯಾಗಿದೆ. ಗಲಭೆಕೋರ ರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಕೋಲಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪರಿಸ್ಥಿತಿ ಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಹಾಗೂ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಘಟನೆಯ ನಂತರ ನಗರದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.