ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿ ಗಳನ್ನು ಆಯ್ಕೆ ಮಾಡಿತ್ತು.
ಪ್ರವೀಣ್ ಸೂದ್ (ಕರ್ನಾಟಕ ಡಿಜಿಪಿ), ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ ಹೆಸರು ಸಿಬಿಐ ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅವಧಿಯು ಮೇ 25 ರಂದು ಕೊನೆಗೊಳ್ಳಲಿದೆ.
1985ರ ಐಪಿಎಸ್ ಬ್ಯಾಚ್ ನ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಕರ್ನಾಟಕ ಕೇಡರ್ನ ಮೂರನೇ ಐಪಿಎಸ್ ಅಧಿಕಾರಿಯಾಗಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಸೇರಿದ ಸೂದ್ 2020 ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ನೇಮಕಗೊಂಡಿದ್ದರು.